ಬಂಟ್ವಾಳ:ರಾಜ್ಯದಲ್ಲಿ ಚುನಾವಣೆ ಗೆಲ್ಲುವ ಹೊಣೆಗಾರಿಕೆ ಪ್ರತೀ ಮತಗಟ್ಟೆ ಪ್ರಮುಖರು ಮತ್ತು ಸದಸ್ಯರಿಗೆ ವಹಿಸಿಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮತ್ತು ಪ್ರಧಾನಿ ನರೇಂದ್ರ ಮೋದಿ ಅಲೆಯಿಂದಾಗಿ ಎಲ್ಲೆಡೆ ಶೇ.70ರಿಂದ 80ರಷ್ಟು ಮತಗಳು ಬಿಜೆಪಿಗೆ ಸಿಗಲಿದೆ ಎಂದು ಮುಂಬೈ ಸಂಸದ, ಬಿಜೆಪಿ ರಾಷ್ಟ್ರೀಯ ಪ್ರಭಾರಿ ಗೋಪಾಲ ಶೆಟ್ಟಿ ಹೇಳಿದ್ದಾರೆ.25btl-Bjp

ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಭಾನುವಾರ ಏರ್ಪಡಿಸಿದ್ದ ಬಿಜೆಪಿ ಮತಗಟ್ಟೆ ಪ್ರಮುಖರ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತೀ ಮತಗಟ್ಟೆ ಸಾಧನೆ ಮತ್ತು ಕೆಲಸ ನಿರ್ವಹಣೆ ಬಗ್ಗೆ ಪಕ್ಷದ ರಾಷ್ಟ್ರೀ ಅಧ್ಯಕ್ಷರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಪರ ಮತ್ತು ಹಿಂದುತ್ವ ಪರ ಮತದಾರರು ಇದ್ದಾರೆ. ಇದರಿಮದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆ ಎದುರಿಸಲು ವಿಳಂಭ ಧೋರಣೆ ಅನುಸರಿಸುತ್ತಿದ್ದಾರೆ. ಅಧಿಕಾರ ದರ್ಪ, ಒಡೆದು ಆಳುವ ನೀತಿ, ಅಕ್ರಮ ಮರಳುಗಾರಿಕೆ, ಡ್ರಗ್ಸ್ ಮಾಫಿಯಾ, ತುಷ್ಠೀಕರಣ ನೀತಿ ಅತಿಯಾಗಿದೆ ಎಂದರು.

3
ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ, ಸುಗುಣ ಕಿಣಿ, ದೇವಪ್ಪ ಪೂಜಾರಿ ಮತ್ತಿತರರು ಇದ್ದರು.ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ. ದೇವದಾಸ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದಶರ್ಿ ರಾಮದಾಸ್ ಬಂಟ್ವಾಳ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದಶರ್ಿ ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸಿದರು.1 (1)

ಬಿಜೆಪಿ ಸೇರ್ಪಡೆ:
ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ, ಬಂಟ್ವಾಳ ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ಕರ್ಪೆ, ನರಿಕೊಂಬು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಿನರಾಜ್ ಕೋಟ್ಯಾನ್, ಲಕ್ಷ್ಮೀನಾರಾಯಣ ಭಟ್, ವಸಂತ, ನಾಗೇಶ್ ಅಮೀನ್ ಬೋಳಂತೂರು, ನಾಗೇಶ್ ಪೂಜಾರಿ ದಿಂಡಿಕೆರೆ, ಉಮೇಶ್ ಟೈಲರ್ ಮೊಗರ್ನಾಡು, ವಸಂತ ಬೋಳಂತೂರು, ಸದಾನಂದ ನಾಟಿ, ನಾಗೇಶ್ ಭಾಗಿರಥಿಕೋಡಿ, ರಮಾನಾಥ ಪೂಜಾರಿ ನಾಯಿಲ ಮತ್ತಿತರರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

By suddi9

Leave a Reply

Your email address will not be published. Required fields are marked *