ಮಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಚುನಾವಣಾ ನೀತಿ ಸಂಹಿತೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೂ ತಟ್ಟಿದೆ.
ಶಾಸಕಿ ಶಕುಂತಲಾ ಶೆಟ್ಟಿ ಅವರು ಇಂದು ಪುತ್ತೂರಿನ ಬೆಟ್ಟಂಪಾಡಿ ಎಂಬಲ್ಲಿಗೆ ಕಾರ್ಯಕ್ರಮಕ್ಕೆ ತೆರಳಿದ್ದರು, ಕಾರ್ಯಕ್ರಮ ಮುಗಿಯುವ ಹೊತ್ತಿಗೆ ಚುನಾವಣೆ ದಿನಾಂಕ ಘೋಷಣೆಯಾಗಿತ್ತು, ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಮುಗಿಸಿದ ಶಾಸಕಿ ಶಕುಂತಲಾ ಶೆಟ್ಟಿ ಸರಕಾರಿ ಕಾರನ್ನು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದರು.

