ಬೆಂಗಳೂರು: ಹಿರಿಯ ನಟಿ ಜಯಂತಿ ಸಾವನಪ್ಪಿದ್ದಾರೆಂದು ಸುಳ್ಳು ಸುದ್ದಿಯೊಂದನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬಹುಭಾಷಾ ನಟಿ ಜಯಂತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅವರು ಚೇತರಿಸಿಕೊಂಡಿದ್ದಾರೆ ಎಂದು ಅವರು ಕುಟುಂಬದವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಿನ್ನೆ ಸಂಜೆಯಿಂದ ಸಾಮಾಜಿಕ ಜಾಲತಾಣದಲ್ಲಿ ಜಯಂತಿ ಸಾವನ್ನಪ್ಪಿದ್ದಾರೆ ಎಂಬ ಪೋಸ್ಟ್ ಗಳು ಕಾಣಿಸಿಕೊಂಡಿವೆ. ಈ ಸುಳ್ಳು ಸುದ್ದಿಯನ್ನು ನಂಬಿ ಕೆಲವು ಚಿತ್ರರಂಗದವರೂ ಇದನ್ನು ಶೇರ್ ಮಾಡಿಕೊಂಡು ತೀವ್ರ ನೋವನ್ನು ಅನುಭವಿಸಿದ್ದಾರೆ ಎಂದು ಹೇಳಲಾಗಿದೆ.

