ಸವದತ್ತಿ : ಸರಣಿ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದ ಸಮೀಪ ಬುಧವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವಿಠ್ಠಲ ಮಾದರ (32) ಎಂದು ಗುರುತಿಸಲಾಗಿದೆ.
ಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆಯುತ್ತಿದ್ದಂತೆಯೇ ಬೈಕೊಂದು ಕಾರಿಗೆ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

