280318_kapu (5)

ಕಾಪು: ತುಳುನಾಡಿನ ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಮೂರು ಮಾರಿಗುಡಿಗಳಲ್ಲಿ ನಡೆಯಲಿರುವ ಕಾಲಾವಧಿ ಸುಗ್ಗಿ ಮಾರಿಪೂಜಾ ಜಾತ್ರೆಗೆ ಇತ್ತೀಚೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

280318_kapu (4)

ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಕಲ್ಯ ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ತರಲಾದ ಆಭರಣ ಮತ್ತು ಮಾರಿಯಮ್ಮ ದೇವಿಯ ಬಿಂಬವನ್ನು ಗದ್ದಿಗೆಯಲ್ಲಿ ಪ್ರತಿಷ್ಠಾಪಿಸಿದ ಬಳಿಕ ಸುಗ್ಗಿ ಮಾರಿಪೂಜೆಗೆ ಏಕಕಾಲದಲ್ಲಿ ಚಾಲನೆ ನೀಡಲಾಯಿತು.

280318_kapu (1)

ಬುಧವಾರ ಸಂಜೆ ಮಾರಿಗುಡಿಗಳಲ್ಲಿ ಮಾರಿಪೂಜಾ ವಿಧಿ – ವಿಧಾನಗಳು ಮುಕ್ತಾಯಗೊಂಡ ಬಳಿಕ ಮಾರಿಯಮ್ಮ ದೇವಿಯ ಬಿಂಬವನ್ನು ಗದ್ದುಗೆಯಿಂದ ಕೆಳಗಿಳಿಸಿ, ಬಿಂಬವನ್ನು ನಿರ್ದಿಷ್ಟ ಪ್ರದೇಶದಲ್ಲಿ ವಿಸರ್ಜಿಸಿದ ಬಳಿಕ ಕಾಪು ಮಾರಿಪೂಜೆಗೆ ಅಧಿಕೃತವಾಗಿ ತೆರೆ ಎಳೆಯಲಾಗುತ್ತದೆ.

By suddi9

Leave a Reply

Your email address will not be published. Required fields are marked *