ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಶಾ ವಿರುದ್ಧ ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ.
ರಾಜ್ಯದಲ್ಲಿ ಪ್ರವಾಸದಲ್ಲಿರುವ ಶಾ, ಸಿದ್ದರಾಮಯ್ಯ ಹಿಂದೂ ವಿರೋಧಿ ಸಿಎಂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಬಗ್ಗೆ ಶಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ವಿ.ಆರ್. ಸುದರ್ಶನ, ಬ್ರಿಜೇಶ್ ಕಾಳಪ್ಪ, ನಟರಾಜು ನೇತೃತ್ವದ ನಿಯೋಗ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಅವರನ್ನು ಭೇಟಿ ಮಾಡಿ ದೂರಿನಲ್ಲಿ ಆಗ್ರಹಿಸಿದ್ದಾರೆ.

