ಕೈಕಂಬ: ಡಿವೈನ್ ವರ್ಡ್ ಚಾರಿಟೇಬಲ್ ಟ್ರಸ್ಟ್, ಭಾರತ್ ಮಾತಾ ಎಜುಕೇಶನ್ ಹಾಗೂ ಕೆಎಂಸಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇಂದು 76ನೇ ಉಚಿತ ಜನರಲ್ ಮೆಡಿಕಲ್ ಶಿಬಿರವನ್ನು ಇಲ್ಲಿನ ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದೆ.
ಇಂದು ಮಧ್ಯಾಹ್ನ 1ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ, ಕ್ಯಾಟರಾಕ್ಟ್ ಶಸ್ತ್ರ ಚಿಕಿತ್ಸೆ ಹಾಗೂ ಅರ್ಹ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದ್ದು, ಸಾರ್ವಜನಿಕರು ಭಾಗವಹಿಸಿ ಈ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.

