ದಾವಣಗೆರೆ: ಜಗಳೂರು ತಾಲೂಕಿನ ದೇವಿಕೆರೆ ಎಂಬಲ್ಲಿ ಓಮ್ನಿಯೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮುಹಮ್ಮದ್ ರಫೀಕ್ (37), ಹಾಫೀಝ್ (56) ಹಾಗೂ ನಾಜ್ ಫೀರ್ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯಿಂದ ಜಗಳೂರಿಗೆ ಬರುವಾಗ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಓಮ್ನಿಯಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

