RahulGandhi-krfG--621x414@LiveMint

ಶಿವಮೊಗ್ಗ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಳೆದ ವಾರವಷ್ಟೇ ಜಿಲ್ಲೆಗೆ ಭೇಟಿ ನೀಡಿ ಹಿಂದಿರುಗಿದ್ದಾರೆ. ಈಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿರುವುದು ಚುನಾವಣಾ ಅಖಾಡ ಮತ್ತಷ್ಟು ರಂಗೇರಲು ಕಾರಣವಾಗಿದೆ.

ಈ ಹಿಂದೆ ರಾಹುಲ್ ಗಾಂಧಿ ಅವರು 2010 ರ ಆಗಸ್ಟ್ ನಲ್ಲಿ ಎಐಸಿಸಿ ಉಪಾಧ್ಯಕ್ಷರಾಗಿದ್ದ ವೇಳೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಕುವೆಂಪು ರಂಗಮಂದಿರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು. ಇದಾಗಿ ಸುಮಾರು 7 ವರ್ಷಗಳ ನಂತರ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *