ಬಂಟ್ವಾಳ: ಕೆಥೋಲಿಕ್ ಸಭಾ ಬಂಟ್ವಾಳ ವಲಯ ಸಮಿತಿಯಿಂದ ಮೊಡಂಕಾಪು ಚರ್ಚ್ ಸಭಾಂಗಣದಲ್ಲಿ ಕೆಥೋಲಿಕ್ ಸಭಾ ಸ್ಥಾಪಕ ಅಧ್ಯಕ್ಷ ವಿವಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ವಾಲ್ಟರ್ ನೊರೊನ್ಹಾ ರವರನ್ನು ಕೆಥೋಲಿಕ್ ಬಂಟ್ವಾಳ ವಲಯದ ಪ್ರಧಾನ ಧರ್ಮಗುರು ಮ್ಯಾಕ್ಸಿಂ ನೊರೊನ್ಹಾ ಸನ್ಮಾನಿಸಿದರು.
ಬಳಿಕ ಮಾತನಾಡಿದ ವಾಲ್ಟರ್ ನೊರೊನ್ಹಾ, ವಿವಿಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಅವರು ಯಾವುದೇ ಕಾರ್ಯಕ್ರಮ ನಡೆದರೂ ಅದನ್ನು ಯಶಸ್ವಿ ಗೊಳಿಸುವ ಕೆಲಸ ನಿರ್ವಹಿಸುತ್ತಿದ್ದರು. ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ಟೇನ್ಲಿ ಲೋಬೋ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಅನಿಲ್ ಲೋಬೋ, ಕಾರ್ಯದರ್ಶಿ ಪ್ರಾನ್ಸಿಸ್ ಡೇಸಾ ಹಾಗೂ ಬಂಟ್ವಾಳ ವಲಯ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


