40418_acc (1)

ಕುಂದಾಪುರ: ಖಾಸಗಿ ಬಸ್  ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಗಂಗೊಳ್ಳಿಯ ಸಮೀಪದ ನಾಂಕವಾಡಿಯಲ್ಲಿ ಬುಧವಾರ ನಡೆದಿದೆ.

ಮೃತರನ್ನು ಗುಜ್ಜಾಡಿ ರಾಮ್ ಮಂದಿರದ ನಿವಾಸಿ ಗಣೇಶ್ ದೇವಾಡಿಗ (59) ಎಂದು ಗುರುತಿಸಲಾಗಿದೆ.

ಗಣೇಶ್ ಅವರು ತ್ರಾಸಿಯಿಂದ ಮನೆ ಕಡೆಗೆ ತೆರಳುತ್ತಿದ್ದ ವೇಳೆ ಗಂಗೋಳ್ಳಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬಸ್ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಮತ್ತು 4 ಮಂದಿ ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *