ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ನೀಡುವ ಕಾರ್ಯಕ್ರಮ ಎ.7 ರಂದು ನಿಗದಿಯಾಗಿದ್ದು, ಆದರೆ 2018ರ ವಿಧಾನ ಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಚುನಾವಣೆ ಮುಗಿದ ಬಳಿಕ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಸಮಾರಂಭ ಕಾರ್ಯಕ್ರಮದ ದಿನಾಂಕ ನಿಗದಿ ಪಡಿಸಿ ಆಯೋಜಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
