karnataka-band

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದೆಂದು ಆಗ್ರಹಿಸಿ ಏ.12ರಂದು  ಕರ್ನಾಟಕ ಬಂದ್‍ಗೆ ಕನ್ನಡಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ನಗರದ ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನಿರ್ವಹಣಾ ಮಂಡಳಿಗೆ ಒತ್ತಾಯಿಸುತ್ತಿರುವ ತಮಿಳುನಾಡು ವಿರುದ್ಧ ಪ್ರತಿಭಟನೆ ನಡೆಸಿದ ವೇಳೆ ಅವರು ಭಾಗವಹಿಸಿ ಮಾತನಾಡಿದರು.

ಕೇಂದ್ರ ಸರಕಾರ ತಮಿಳುನಾಡು, ಕಾವೇರಿ ವಿಚಾರದಲ್ಲಿ ನಾಟಕವಾಡುತ್ತಿದೆ. ಕಾವೇರಿ  ನಿರ್ವಹಣಾ ಮಂಡಳಿ ರಚಿಸಬಾರದು, ರಚಿಸಿದರೆ ತೀವ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಕೇಂದ್ರ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ಪ್ರತಿಭಟನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ ರಾ ಗೋವಿಂದ್, ಮಂಜುನಾಥ ದೇವಾ ಹಾಗೂ ಇತರೆ ಕನ್ನಡಪರ ಸಂಘಟನೆಗಳ ನಾಯಕರುಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

By suddi9

Leave a Reply

Your email address will not be published. Required fields are marked *