3858fac5-b90c-443c-a24b-ad5e25d6ca2c

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಚುನಾವಣೆಯ ಪ್ರಯುಕ್ತ 205- ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿಗಳು, ಸೆಟ್ಟರ್ ಅಧಿಕಾರಿಗಳು, ಮಾಸ್ಟರ್ ಟ್ರೈನರ್, ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿದ್ಯುದ್ಮಾನ ಮತದಾನ ಪ್ರಕ್ರಿಯೆಯ ಬಗ್ಗೆ ತರಬೇತಿ ಕಾರ್ಯಾಗಾರ ತಾಲೂಕು ಪಂಚಾಯತ್ ನ ಎಸ್ ಜೆಎಸ್ ವೈ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಈ ವೇಳೆ ಇವಿಎಂ ಪ್ರಾತ್ಯಕ್ಷಿಕೆ ಜತೆಗೆ ವಿವಿ ಪ್ಯಾಟ್ ಬಳಕೆಯ ಬಗ್ಗೆ  ರಾಜ್ಯ ಚುನಾವಣಾ ತರಬೇತಿದಾರ ಡಾ. ಜಾನ್ ಪಿಂಟೋ ತರಬೇತಿ ನೀಡಿದರು.

b961fb37-3d39-4c87-b251-2366b2ba03eb

ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಸರಿಹಳ್ಳಿ, ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಜೀನ್ ಮೇರಿ ತಾವ್ರೋ,  205 ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ  ನೋಡೆಲ್ ಅಧಿಕಾರಿ  ರಾಜಣ್ಣ. ಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ನವೀನ್ ಬೆಂಜನಪದವು ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ದ್ವಿತೀಯ ದರ್ಜೆ ಸಹಾಯಕ ವಿನಯ ನಾಗರಾಜ್  ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *