50418_swedel

ಮಂಗಳೂರು: ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಶೋಚನೀಯ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಮೃತಳನ್ನು ಕೊಣಾಜೆ ಅಸೈಗೋಳಿ ನಿವಾಸಿ ಸ್ವೀಡಲ್ ಸ್ವೀಟಿ ಡಿ ಸೋಜ ಎಂದು ಗುರುತಿಸಲಾಗಿದೆ.

ಸ್ವೀಡಲ್ ಮಂಗಳೂರಿನ ಸೈಂಟ್ ಆನ್ಸ್ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದು, ಈಕೆ ನಗರದ ರೊಸಾರಿಯೋ ಹೈಸ್ಕೂಲ್‌ನಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಳು. ಐದು ವಿಷಯಗಳ ಪರೀಕ್ಷೆಗಳನ್ನು ಬರೆದು ಪೂರ್ಣಗೊಳಿಸಿದ್ದಳು. ಬುಧವಾರ ಪರೀಕ್ಷೆ ಬರೆದು ಮನೆಗೆ ತೆರಳಿದ್ದ ಈಕೆಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ.

By suddi9

Leave a Reply

Your email address will not be published. Required fields are marked *