ಮೈಸೂರು: ಮುಂದಿನ ವಿಧಾನಸಭೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬೇರೆಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ. ಬೇರಾವುದೇ ಕ್ಷೇತ್ರಕ್ಕೆ ಹೋಗುವುದಿಲ್ಲ. ಇನ್ನೂ ಎಷ್ಟು ಬಾರಿ ನಾನು ಇದನ್ನು ನಿಮಗೆ ಹೇಳಲಿ. ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ ಅವರು, ಚಾಮುಂಡೇಶ್ವರಿಯಲ್ಲೇ ನನ್ನ ಸ್ಪರ್ಧೆ ಅಂತ ಹಿಂದೆ ಹಲವಾರು ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದರು.
ಎಚ್ಡಿಕೆ ವಿರುದ್ದ ವಾಗ್ದಾಳಿ: ಎಸ್ಕಾರ್ಟ್ ನಲ್ಲಿ ಹಣ ಸಾಗಿಸುತ್ತಿದ್ದಾರೆ ಎಂಬ ಎಚ್.ಡಿ.ಕೆ ಆರೋಪಕ್ಕೆ ಸಿಎಂ ತಿರುಗೇಟು ನೀಡಿ, ಎಚ್ ಡಿಕೆ ತಮ್ಮ ಸ್ವ ಅನುಭವವನ್ನ ಹೇಳಿಕೊಡಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ಈಗ ನಾವು ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಕೆಂಪಯ್ಯ ಮೇಲೆ ಇಲ್ಲ ಸಲ್ಲದ ದೂರು ಹೇಳುತ್ತಿದ್ದಾರೆ. ಇದು ಅವರ ಹತಾಶ ಮನಸ್ಥಿತಿ ಎಂದು ಸಿಎಂ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದರು.

