ವಿಜಯಪುರ: ಯುವಕನೊಬ್ಬ ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ತನ್ನದೇ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾನೆ.
ವಿಜಯರಂಜನ ಜೋಶಿ ತನ್ನ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಯುವಕ. ಈತ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿಯಾಗಿದ್ದಾನೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ವರ್ಷಗಳಿಂದ ಸರ್ಕಾರಿ ಶಾಲಾ-ಕಾಲೇಜುಗಳ ಸಂಖ್ಯೆ ಕಡಿಮೆ ಇವೆ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶಾಲೆ ನಿರ್ಮಿಸಬೇಕೆಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ.
ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ.ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದೆ. ಇದರಿಂದ ನನಗೆ ತುಂಬ ನೋವಾಗಿದೆ, ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ಯುವಕ ಪತ್ರದಲ್ಲಿ ತಿಳಿಸಿದ್ದಾನೆ.

