pvec24sep16magrahara
ಬೆಂಗಳೂರು: ಜೈಲಿನಲ್ಲಿ ಕೈದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪರಪ್ಪನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.

ಮಾಸ್ತಿ ಕುಮಾರ್(32) ಆತ್ಮಹತ್ಯೆ ಮಾಡಿಕೊಂಡ ಕೈದಿ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಮೂಲದ ಈತ ಜೈಲಿನ ಎ ಬ್ಲಾಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಮಾಸ್ತಿ ಕುಮಾರ್ ಮೃತ ದೇಹ ವಿಕ್ಟೋರಿಯಾ ಆಸ್ಪತ್ರೆಯಲ್ಲಿದೆ.

ಇನ್ನು ಮಾಸ್ತಿ ಕುಮಾರ್ 10 ತಿಂಗಳ ಹಿಂದೆ ಜೈಲು ಸೇರಿದ್ದ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *