voter_list_2179728_835x547-m

ಮಂಗಳೂರು: ರಾಜ್ಯ ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವ ಅರ್ಹ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಎ. 8 ರಂದು ಒಂದು ದಿನದ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತು ಮಟ್ಟದ ಅಧಿಕಾರಿ ಉಪಸ್ಥಿತರಿರಲಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗೆ ನೀಡಲಿದ್ದಾರೆ. ಈ ವೇಳೆ  ಸಾರ್ವಜನಿಕರು ತಮ್ಮ  ಹೆಸರು ಫೆ.28ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲನೆಯಿಂದ ದೃಢಪಡಿಸಿಕೊಳ್ಳಬೇಕು.

ತಮ್ಮ  ಹೆಸರು ಮತದಾರರ ಪಟ್ಟಿಯಲ್ಲಿ  ಇಲ್ಲದಿದ್ದರೆ, ಅವರಿಗೆ ಸ್ಥಳದಲ್ಲಿಯೇ ಫಾರಂ 6 ನ್ನು ನೀಡಿ ಅದನ್ನು ಭರ್ತಿ ಮಾಡಿ ಅವಶ್ಯವುಳ್ಳ ದಾಖಲೆಗಳೊಂದಿಗೆ ಪಡೆಯಲಾಗುವುದು. ಆದ್ದರಿಂದ ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *