ಚಾಮರಾಜನಗರ: ಸ್ನೇಹಿತೆಯನ್ನು ರಕ್ಷಿಸಲು ಹೋದ ಯುವತಿಯೋರ್ವಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಯರಂಬಾಡಿ ಜಲಾಶಯದಲ್ಲಿ ನಡೆದಿದೆ.
ಮೂಲತಃ ಬೆಂಗಳೂರಿನ ನಿವಾಸಿ ನಿಖಿತಾ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ನಿಖಿತಾ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ್ದಿದ್ದು, ಈ ವೇಳೆ ನಿಖಿತಾಳ ಸ್ನೇಹಿತೆಯೋರ್ವಳು ಕಾಲು ಜಾರಿ ಜಲಾಶಯಕ್ಕೆ ಬಿದ್ದಿದ್ದಾರೆ. ಇದರಿಂದ ಆಘಾತಗೊಂಡಿದ್ದ ನಿಖಿತಾ ನೀರಿಗೆ ಧುಮುಕಿ ತನ್ನ ಸ್ನೇಹಿತೆಯನ್ನು ಪಾರು ಮಾಡಲು ಯತ್ನಿಸುತ್ತಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಇನ್ನು ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಸ್ಥಳೀಯರ ಸಹಾಯದಿಂದ ನಿಖಿತಾಳ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ ನಿಖಿತಾ ಸ್ನೇಹಿತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

