rajaram-bhat-e1523167138888

ಮಂಗಳೂರು: ಕೈರಂಗಳದ ಅಮೃತಧಾರೆಯಲ್ಲಿ ನಡೆದ ಗೋಕಳವು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರಾಜಾರಾಮ್ ಭಟ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ದಾಖಲಾಗಿರುವ ರಾಜಾರಾಮ್ ಭಟ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್  ಆಸ್ಪತ್ರೆಗೆ ಭೇಟಿ  ಮಾಡಿ ಆರೋಗ್ಯ ವಿಚಾರಿಸಿದರು.

ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಆಗ್ರಹಿಸಿ ರಾಜಾರಾಮ್ ಭಟ್ ಅವರು ಎ. 1 ರಿಂದ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಅವರ ಉಪವಾಸ ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು ಬೆಂಬಲವನ್ನು ಸೂಚಿಸಿತ್ತು. ನಿನ್ನೆ ರಾತ್ರಿ ಅವರು ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *