ಉಡುಪಿ: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತ ಗುರುರಾಜ್ ಪೂಜಾರಿಗೆ 25 ಲಕ್ಷ ನಗದು, ಸರ್ಕಾರಿ ನೌಕರಿ ನೀಡುವುದಾಗಿ ಸಚಿವ ಪ್ರಮೋದ್ ಮಧ್ವರಾಜ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

