ಮಂಗಳೂರು: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯಿರುವ ಪಾಮ್ ಟಚ್ ಎಂಬ ಹೆಸರಿನ ಮಸಾಜ್ ಸೆಂಟರ್ ಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಉಮೇಶ್, ಜಗದೀಶ್, ಮಹೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.
ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯಿರುವ ಆದಿತ್ಯ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಪಾಮ್ ಟಚ್ ಎಂಬ ಮಸಾಜ್ ಸೆಂಟರ್ ನಲ್ಲಿ ಯುವತಿಯನ್ನು ಹಾಗೂ ಮಹಿಳೆಯರನ್ನು ಇಟ್ಟುಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಪೊಲೀಸರು ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಗೆ ಪ್ರೇರೇಪಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ

