ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೈಸೂರು ಮೂಲದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಿತ್ತೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಸಭವಿಸಿದೆ.
ಮೃತರನ್ನು ಸುದೀಂದ್ರಗೌಡ, ಮಲ್ಲಿಕಾರ್ಜುನ, ರಘುನಾಥಎಂಧು ಗುರುತಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಗೋವಾದಿಂದ ಚೆನ್ನಮ್ಮ ಕಿತ್ತೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಈ ಬಗ್ಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

