ಕಲ್ಲಡ್ಕ: 2017-18ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಇಲ್ಲಿನ ಶ್ರೀರಾಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದಅಮೃತಾ ಬಿ., ಆದಿತ್ಯ ಮೈಥಿಲಿ, ವೈಷ್ಣವಿ ಪಿ.ಎಸ್., ವಿಜೇಶ್, ಅಕ್ಷಯ್, ಯಶ್ವಿತ್, ಮನೀಶ್ ಅಂಚನ್ ಹಾಗೂ ಅಜಯ್ ಕುಮಾರ್ ರ್ಯಾಂಕ್ ಗಳಿಸಿದ್ದಾರೆ.
ಈ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿ, ಮಾತೃಭಾರತಿ ಹಾಗೂ ಶಿಕ್ಷಕ ವೃಂದ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಪ್ರಕಟನೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

