ಮಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ನಲಿಕೆಯವರ ಸಮಾಜ ಸೇವಾ ಸಂಘ ದೂರು ದಾಖಲಿಸಿದೆ.
ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್, ಪ್ರಭಾಕರ ಶಾಂತಿಕೋಡಿಯವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಚಿವ ಯು.ಟಿ. ಖಾದರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಲಾಗಿದೆ.

