ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡಲಿದೆ.
ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಪಕ್ಷದ ಮುಖಂಡೆ ಶೋಭಾ ಕರಂದ್ಲಾಜೆ ಬುಧವಾರ ಈ ವಿಷಯ ತಿಳಿಸಿದರು.
ಪಕ್ಷವು ಈ ಬಾರಿ ಕನಿಷ್ಠ 130 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂದೂ ಅವರು ಹೇಳಿಕೊಂಡರು.
ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಅದನ್ನು ಶಮನ ಮಾಡಲು ನಾಯಕರು ಹರಸಾಹಸ ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದು, ಬಂಡಾಯದ ಭೀತಿಯನ್ನು ಪಕ್ಷ ಎದುರಿಸುತ್ತಿದೆ. ಹೀಗಾಗಿ ಎರಡನೇ ಪಟ್ಟಿ ಸಿದ್ಧಗೊಳಿಸುವುದು ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

