ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರು ’ಭೂತ ಕಟ್ಟುನಾಯಗ್ ಮಂಡೆ ಸರಿ ಇಜ್ಜಿ ’ (ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ) ಎನ್ನುವ ಹೇಳಿಕೆ ನೀಡುವ ಮೂಲಕ ನಲಿಕೆ ಸಮಾಜದವರನ್ನು ನಿಂದಿಸಿದ್ದಾರೆ ಎಂದು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಪ್ರಭಾಕರ್ ಶಾಂತಿಕೋಡಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,
ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎನ್ನುವ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ತಲೆ ಸರಿ ಇದೆಯೇ. ಅವರು ಮಾನಸಿಕರಂತೆ ಮಾತನಾಡುತ್ತಿದ್ದಾರೆ. ನಾಡಿನಾದ್ಯಂತ ಹಲವಾರು ಕೋಮು ಸಂಘರ್ಷಗಳಿಗೆ ಕಾರಣವಾಗಿ ಕ್ರಿಮಿನಲ್ ಕೇಸುಗಳನ್ನು ಹಾಕಿಸಿಕೊಂಡಿರುವರುವ ಓರ್ವ ಅಪ್ಪಟ ಕ್ರಿಮಿನಲ್, ಅವರಿಗೆ ದೈವ ನರ್ತಕರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಎಂದು ಕಿಡಿಕಾರಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೇಳಿಕೆಯಿಂದ ನಲಿಕೆಯವರ ಸಮಾಜಕ್ಕೆ ನೋವಾಗಿದ್ದು, ಈ ಬಗ್ಗೆ ಈಗಾಗಲೇ ಕಲ್ಲಡ್ಕ ಭಟ್ ಹೇಳಿಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದೇವೆ ಎಂದರು.

