973b3c03-7855-401a-8535-49fcc3ac9412

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಾಡಳಿ, ತಾಲೂಕಾ ಪಂಚಾಯತ್, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಎ.14ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ 127ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಗೌತಮ ಬುದ್ಧ ವೃತ್ತದ ಹತ್ತಿರ ತೋಟಗಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ 9.30ಕ್ಕೆ ನಡೆಯುವ ಈ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರಶಾಂತ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣರಾವ ಯಕ್ಕುಂಡಿ, ಡಿವೈಎಸ್ಪಿ ರಾಮಣ್ಣ ಬಸರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ ನೇಮಗೌಡ ಮತ್ತು ಉಪನ್ಯಾಸಕರಾಗಿ ಧಾರವಾಡದ ಪ್ರಾಧ್ಯಾಪಕ ಡಾ.ಸದಾನಂದ ಸುಗಂದಿ ಆಗಮಿಸಲಿದ್ದಾರೆ.

ಸಮಾರಂಭದಲ್ಲಿ ಅನೇಕ ಗಣ್ಯ ನಾಗರಿಕರು, ತಾಲೂಕಾ ಮಟ್ಟದ ಅಧಿಕಾರಿಗಳು,ಸಿಬ್ಬಂದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ವರದಿ: ಹಣಮಂತ ಮೀಶಿ ಸುದ್ದಿ9 ನ್ಯೂಸ್ ಬೆಳಗಾವಿ ಜಿಲ್ಲಾ ವರದಿಗಾರ

By Suddi9

Leave a Reply

Your email address will not be published. Required fields are marked *