amith-new

ಧಾರವಾಡ: ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ, ಸಂಸತ್ತಿನಲ್ಲಿ ಅಧಿವೇಶನ ನದೆಸಲು ಅವಕಾಶ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಷ್ಟ್ರಾದ್ಯಂತ ಇಂದು ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದಲ್ಲೂ ಪ್ರತಿಭಟನೆ ನಡೆಯುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 11ಕ್ಕೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರುನಾಡ ಜಾಗೃತಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬುಧವಾರ ರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿರುವ ಅಮಿತ್ ಶಾ ಇಂದು ಮಧ್ಯಾಹ್ನ 2 ಗಂಟೆಯವರೆಗೂ ಧಾರವಾಡದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *