ಎ. 20: ಸ್ಪೋರ್ಟ್ಸ್ ಕ್ಲಬ್ ನ ನೂತನ ಕಟ್ಟಡ ಉದ್ಘಾಟನೆ
ತೋಕೂರು: ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಎ.20ರಂದು ಇಲ್ಲಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್‌ದಾಸ್ ತಿಳಿಸಿದ್ದಾರೆ.
ತೋಕೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ನೂತನವಾಗಿ ನಿರ್ಮಾಣಗೊಂಡ ಈ ಕಟ್ಟಡವನ್ನು ಎ.20ರಂದು ಕಲ್ಬುರ್ಗಿ ಕೇಂದ್ರ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್.ಆರ್. ಶೆಟ್ಟಿ ಬೆಂಗಳೂರು ಉದ್ಘಾಟಿಸಲಿದ್ದು, ಕಾರ್ಯಕ್ರಮವನ್ನು ಎಂಆರ್ ಪಿಎಲ್‌ನ ಲಕ್ಷ್ಮೀ ಕುಮಾರನ್ ಉದ್ಘಾಟಿಸಲಿದ್ದಾರೆ ಎಂದವರು,ಎ. 21ರಂದು ಧ್ವಜಸ್ತಂಭವನ್ನು ಜೈ ಕೃಷ್ಣ ಬಿ. ಕೋಟ್ಯಾನ್ ಉದ್ಘಾಟಿಸಲಿದ್ದು, ಸುನೀಲ್ ಡಿ. ರೈ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷ ರತನ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರಶಾಂತ್ ಕುಮಾರ್ ಬೇಕಲ್, ಜಿ.ಕೆ. ನಾರಾಯಣ, ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.