n-r

ಸುಳ್ಯ: ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಲು ಹಲವರು ಮುಂದಾಗಿದ್ದು, ಕೆಲ ದಿನಗಳಲ್ಲಿ ಯಾವ ಪಕ್ಷದಿಂದ ಯಾರು ಪಕ್ಷ ಬಿಡುತ್ತಾರೆ ಅನ್ನುವುದು ರಮನಾಥ ರೈ ಅವರಿಗೆ ಗೊತ್ತಾಗಲಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್ ಟೀಕಿಸಿದ್ದಾರೆ.

ತಾಲೂಕಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಸಿ ಮಾತನಾಡಿದ ಅವರು, ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಮುಖಂಡರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದು, ಶೀಘ್ರ ಪಕ್ಷವನ್ನು ಸೇರಲಿದ್ದಾರೆ ಎಂದಿದ್ದ ಸಚಿವ ರಮಾನಾಥ ರೈ ಅವರ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಅವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ್‌ ಕಣೆಮರಡ್ಕ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್‌ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋಧ ಶೆಟ್ಟಿ ಮೇನಾಲ, ಉಮೇಶ್‌ ವಾಗ್ಲೆ, ಎನ್‌.ಎ. ರಾಮಚಂದ್ರ, ಶೀನಪ್ಪ ಬಯಂಬು, ವಿನಯ ಕುಮಾರ್‌ ಕಂದಡ್ಕ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *