ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದ್ದು, ಅದರಂತೆ ಎ.13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿಯ ದೃಷ್ಟಿಯಿಂದ ರಾಜಕೀಯ ನಡೆಸುತ್ತಿದೆ. ಇದಕ್ಕಾಗಿ ಎ. 18ರಂದು ಮನೆಮನೆ ಸಂಪರ್ಕದ ಅಭಿಯಾನ ಪ್ರಾರಂಭವಾಗಲಿದೆ. ಬೆಳಗ್ಗೆ 10ಕ್ಕೆ ಅನಂತಶಯನ ವೃತ್ತದಿಂದ ಮೆರವಣಿಗೆ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಣಿರಾಜ್ ಶೆಟ್ಟಿ, ವಕ್ತಾರ ಹರೀಶ್ ಶೆಣೈ, ನಗರ ಅಧ್ಯಕ್ಷ ಅನಂತಕೃಷ್ಣ ಶೆಣೈ ಉಪಸ್ಥಿತರಿದ್ದರು.

