ಬಳ್ಳಾರಿ: ನಿಯಂತ್ರಣ ತಪ್ಪಿದ ಕಾರೊಂದು ಬ್ರಿಡ್ಜ್ ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಸಿರುಗುಪ್ಪ ರಸ್ತೆಯ ಭಾಗ್ಯನಗರದ ಬಳಿ ನಡೆದಿದೆ.
ಡಾ.ಸಂತೋಷ್, ಡಾ.ಅರ್ಚನ, ಸಿದ್ದರಾಮಪ್ಪ, ಮಗು ಲಕ್ಷ್ಮೀ ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತಪಟ್ಟವರು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ.
ಘಟನೆಯಲ್ಲಿ ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕುರುಗೋಡು ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

