ಸುರತ್ಕಲ್: ಎಸ್ ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವತಿಯಿಂದ ಎ.15ರಂದು ಚುನಾವಣಾ ಪೂರ್ವ ಕಾರ್ಯಕರ್ತರ ಸಮಾವೇಶ ಸಂಜೆ 7ಕ್ಕೆ ಇಲ್ಲಿನ ಚೊಕ್ಕಬೆಟ್ಟುವಿನ ಎಂಜೆಎಂ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಇದಕ್ಕೂ ಮುನ್ನ 4.30ಕ್ಕೆ ಸುರತ್ಕಲ್ ನಿಂದ ಚೊಕ್ಕಬೆಟ್ಟು ಜಂಕ್ಷನ್ ವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ. ಬಳಿಕ ನಡೆಯುವ ಸಮಾವೇಶವನ್ನು ಎಸ್ ಡಿಪಿಐ ದ.ಕ.ಜಿಲ್ಲಾಧ್ಯಕ್ಷ ಎ.ಎಂ. ಅಥಾವುಲ್ಲಾ ಜೋಕಟ್ಟೆ ಉದ್ಘಾಟಿಸಲಿದ್ದು, ಎಸ್ ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ನೂರುಲ್ಲಾ ಕುಳಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಅಲ್ಫಾನ್ಸೋ ಫ್ರಾಂಕೊ, ಎಸ್ ಡಿಟಿಯು ರಾಜ್ಯಾಧ್ಯಕ್ಷ ಅಬ್ದುಲ್ ಜಲೀಲ್ ಕೆ., ಎಸ್ ಡಿಪಿಐ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಎಸ್ ಡಿಪಿಐ ದ.ಕ. ಜಿಲ್ಲಾ ಸಮಿತಿ ಸದಸ್ಯ ಎ.ಕೆ.ಅಶ್ರಫ್, ಎಸ್ ಡಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಕಾರ್ಪೋರೇಟರ್ ಅಯಾಝ್ ಕೃಷ್ಣಾಪುರ, ಪಿಎಫ್ ಐ ದ.ಕ. ಜಿಲ್ಲಾಧ್ಯಕ್ಷ ನವಾಝ್ ಉಳ್ಳಾಲ, ಎಸ್ ಡಿಪಿಐ ದ.ಕ.ಜಿಲ್ಲಾ ಉಪಾಧ್ಯಕ್ಷರಾದ ಆ್ಯಂಟಿನಿ.ಪಿ.ಡಿ.ಬೆಳ್ತಂಗಡಿ, ಆನಂದ ಮಿತ್ತಬೈಲ್ ಹಾಗೂ ಪಿಎಫ್ ಐ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಾದರ್ ಕುಳಾಯಿ ಮತ್ತಿತರರು ಭಾಗವಹಿಸಲಿದ್ದಾರೆ.
ಇದೇ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿಯನ್ನು ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

