ಸುದ್ದಿ9ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಂಟ್ವಾಳ ಕೂರಿಯಾಳ ಒಕ್ಕೂಟದ ನೇತೃತ್ವದಲ್ಲಿ ಆಟಿದ ಒಂಜಿ ಕೂಟ ಕೂರಿಯಾಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ನಳಿನಿ ಬಿ.ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ರೇ| ಫಾ| ಪೀಟರ್ ಆರಾನ್ಹಾ, ಶ್ರೀ ಕ್ಷೇ.ಧ.ಗ್ರಾ.ಯೋ. ಕೃಷಿ ಅಧಿಕಾರಿ ನಾರಾಯಣ್, ಕನರ್ಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ಡಿ.ಎಂ. ಕುಲಾಲ್, ಶ್ರೀ ಕ್ಷೇ.ಧ.ಗ್ರಾ.ಯೋ. ಬಂಟ್ವಾಳ ವಲಯದ ಅಧ್ಯಕ್ಷ ಹಾಗೂ ಒಕ್ಕೂಟದ ಅಧ್ಯಕ್ಷ ನಾಗೇಶ್ ಭಂಡಾರಿ, ವಲಯ ಮೇಲ್ವಿಚಾರಕಿ, ಒಕ್ಕೂಟದ ಸೇವಾ ಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸರ್ವ ಸದಸ್ಯರುಗಳು ಉಪಸ್ಥಿರಿದ್ದರು.
