ಹಾವೇರಿ: ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್ಎಲ್ ಖಾಸಗಿ ಬಸ್ ಇಲ್ಲಿನ ಹಾನಗಲ್ ಕ್ರಾಸ್ ಬಳಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಡಾ.ಜಯಲಕ್ಷ್ಮೀ (45) ಹಾಗೂ ಗೀತಾ (27) ಮೃತ ದುರ್ದೈವಿಗಳು.
ಸೋಮವಾರ ಮುಂಜಾನೆ ಬೆಂಗಳೂರಿನಿಂದ ಸಾಗರದ ಮಾರ್ಗವಾಗಿ ಸಾಗುತ್ತಿದ್ದ ಬಸ್ಸು ಹಾನಗಲ್ ಸಮೀಪ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು.
ಢಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು ಎಂದು ತಿಳಿದುಬಂದಿದ್ದು ಸುಮಾರು ಇಪ್ಪತೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

