ಬೆಂಗಳೂರು : ಕನ್ನಡ ಸಿನಿಮಾರಂಗದಲ್ಲಿ ಬಾಲನಟಿಯಾಗಿ ಅಭಿನಯಿಸಿ, ನಾಯಕಿನಟಿಯಾಗಿ ಯಶಸ್ಸು ಕಂಡು ಚಲನಚಿತ್ರರಂಗದಿಂದ ದೂರವಿರುವ ನಟಿ ಅಮೂಲ್ಯ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಬಿಜೆಪಿಯಲ್ಲಿ ಶಾಸಕ ಸ್ಥಾನಕ್ಕೆ ಪೈಪೋಟಿ ನಡೆಸಿದ್ದ ಅಮೂಲ್ಯ ಅವರ ಮಾವ, ಮಾಜಿ ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರ ಅವರು ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಬಂಡಾಯವೆದ್ದಿದ್ದರು. ಈಗ ರಾಮಚಂದ್ರ ಹಾಗೂ ಅವರ ಸೊಸೆ ನಟಿ ಅಮೂಲ್ಯ ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮ್ಮುಖದಲ್ಲಿ ಅಮೂಲ್ಯ, ಹಾಗೂ ಅವರ ಮಾವ ಮಾಜಿ ಕಾರ್ಪೋರೇಟರ್ ರಾಮಚಂದ್ರ ಹಾಗೂ ಪತಿ ಜಗದೀಶ್ ಅವರು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಇದೇ ವೇಳೆ ಜೆಡಿಎಸ್ ನಿಂದ ಇನ್ನು ಟಿಕೆಟ್ ಘೋಷಣೆಯಾಗದ ರಾಜರಾಜೇಶ್ವರಿ ನಗರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಮಾಜಿ ಕಾರ್ಪೋರೇಟರ್ ಅಮೂಲ್ಯ ಅವರ ಮಾವ ರಾಮಚಂದ್ರ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗುವುದು ಎನ್ನಲಾಗುತ್ತಿದ್ದು, ಕಾದ ನೋಡಬೇಕಾಗಿದೆ.

