ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ, ಇದೆಲ್ಲ ಹಿಂದುತ್ವದ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡುವರು ರೇಪಿಸ್ಟ್ ಗಳು ಎಂದು ರಶ್ಮಿನಾಯರ್ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ತನ್ನ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಶ್ಮಿ ನಾಯರ್ ಅವರು, “ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ ನಾನೊಬ್ಬಳೆ ಉಬರ್ ಪ್ರಯಾಣ ಮಾಡುತ್ತಿರುತ್ತೇನೆ. ನಾನೊಬ್ಬಳಲ್ಲದೇ ನನ್ನ ಜೊತೆ ಕೆಲಸ ಮಾಡಿಕೊಂಡಿರುವ ಹಲವು ಮಹಿಳಾ ಸಹದ್ಯೋಗಿಗಳು ಸಹ ಉಬರ್ ಕ್ಯಾಬ್ ನಲ್ಲಿ ಒಬ್ಬೊಬ್ಬರೇ ಸಂಚರಿಸುತ್ತಾರೆ. ಆದರೆ ಕೆಲವು ಕ್ಯಾಬ್ ಗಳ ಮೇಲ ಹಿಂದುತ್ದ ಸಂಕೇತವುಳ್ಳ ರುದ್ರ ಹನುಮಾನ್ ಮುಂತಾದ ಭಾವಚಿತ್ರಗಳನ್ನು ಹಾಕಲಾಗುತ್ತದೆ. ಈ ಕ್ಯಾಬ್ ಗಳಲ್ಲಿ ಪ್ರಯಾಣಿಸಲು ಭಯವಾಗುತ್ತಿದೆ” ಎಂದಿದ್ದಾರೆ.
“ಸಾಕಷ್ಟು ಹಿಂದುತ್ವ ಸಂಘಟನೆಗಳು ಮತ್ತು ಮುಖಂಡರು ಕಥುವಾದಲ್ಲಿ ನಡೆದ ರೇಪ್ ಪ್ರಕರಣದ ಆರೋಪಿಗಳ ಪರವಾಗಿ ವಾದಿಸುತ್ತಾರೆ. ನಾನು ನನ್ನ ಸಹದ್ಯೋಗಿಗಳು ಈ ರೀತಿಯ ಹಿಂದುತ್ವದ ಸಂಕೇತವುಳ್ಳ ಉಬರ್ ಕ್ಯಾಬ್ ನಲ್ಲಿ ಪ್ರಯಾಣಿಸಲು ಭಯವಾಗುತ್ತಿದೆ. ಹಾಗಾಗಿ ಹಿಂದುತ್ವದ ಸಂಕೇತ ಭಾವ ಚಿತ್ರ ಮತ್ತು ಚಿಹ್ನೆವುಳ್ಳ ಕ್ಯಾಬ್ ಗಳಲ್ಲಿ ಇನ್ಮುಂದೆ ಸಂಚರಿಸುವುದಿಲ್ಲ” ಹೇಳಿದ್ದಾರೆ.

