
ಸಿಂಗಾಪುರ: ಬಿಸಿಸಿಐಯ ಮಖ್ಯಸ್ಥರಾಗಿರುವ ಎನ್. ಶ್ರೀನಿವಾಸನ್ ಅವರು ಐಸಿಸಿಯ ನೂತನ ಮುಖ್ಯಸ್ಥರಾಗಿ ಆಯ್ಕೆಯಾಗುವ ಮೂಲಕ ಭಾರತ ಕ್ರಿಕೆಟ್ ಜಗತ್ತಿನ ಪಾಲಿಗೆ ಹೊಸತೊಂದು ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.
ಶ್ರೀನಿವಾಸನ್ ಮುಂಬರುವ ಜುಲೈಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಹಾಲಿ ಬಿಸಿಸಿಯ ಮುಖ್ಯಸ್ಥ ಅತೀವ ಸಂತೋಷ ವ್ಯಕ್ತಪಡಿಸಿದ್ದು ತಮ್ಮ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ಹೊಸ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲು ನಿರ್ಧರಿಸಲಾಗಿದೆ. ಇದರಂತೆ ಐದು ಸದಸ್ಯರ ಮಂಡಳಿಯೊಂದನ್ನು ರಚಿಸಿ ಅದರಲ್ಲಿ ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾಕ್ಕೆ ಮೂರು ಸ್ಥಾನಗಳನ್ನು ಮೀಸಲಿಡುವ ಪ್ರಸ್ತಾವನೆಯಿದೆ. ಈ ಪ್ರಸ್ತಾವನೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ವಿರೋಧ ವ್ಯಕ್ತಪಡಿಸಿರುವುದರಿಂದ ಉಳಿದ ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಎಂಟು ತಂಡಗಳ ಅಭಿಪ್ರಾಯವನ್ನು ಪರಿಗಣಿಸಿ ಈ ಬದಲಾವಣೆಗಳನ್ನು ಮಾಡಲಾಗಿದೆ
