ಸುದ್ದಿ9ಬಜ್ಪೆ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟ್ ಆಫ್ ಇಂಡಿಯಾ ವತಿಯಿಂದ `ಮುಸ್ಲಿಮರಿಗೆ ರಾಜಕೀಯದ ಅನಿವಾರ್ಯತೆ’ ವಿಷಯದ ಕುರಿತ ಸಂವಾದ ಕಾರ್ಯಕ್ರಮ ಬಜ್ಪೆಯಲ್ಲಿ ಶನಿವಾರ ನಡೆಯಿತು.
ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷ ಹನೀಫ್ ಖಾನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. `ಮುಸ್ಲಿಮರು ಇಂದಿನ ದಿನಗಳಲ್ಲಿ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿಲ್ಲ. ಇದರ ಪರಿಣಾಮ ಅವರನ್ನು ಎಲ್ಲ ರಂಗಗಳಲ್ಲೂ ಕೀಳರಿಮೆಯಿಂದ ನಡೆಸಿಕೊಳ್ಳಲಾಗುತ್ತಿದೆ. ಮುಸ್ಲಿಮರು ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ ಹೊಂದಿದಷ್ಟೂ ಇನ್ನಷ್ಟು ಸದೃಢರಾಗಿ ಬೆಳೆಯಲು ಸಾಧ್ಯ’ ಎಂದು ಹನೀಫ್ ಖಾನ್ ಅಭಿಪ್ರಾಯಪಟ್ಟರು.
ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎ.ಕೆ.ಅಶ್ರಫ್, ಎಸ್ಡಿಪಿಐ ಜಿಲ್ಲಾ ಸದಸ್ಯ ಇಸ್ಮಾಯಿಲ್ ಇಂಜಿನಿಯರ್ ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



