ಬಂಟ್ವಾಳ: ತಾಲೂಕಿನ ಪ್ರಮುಖ ಕ್ಷೇತ್ರಗಳಾಗಿರುವ ಶ್ರೀ ಮಹಾಲಿಂಗೇಶ್ವರ, ಶ್ರೀ ಹನುಮಂತ ಹಾಗೂ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ನಾಯಕ ಉದಯಕುಮಾರ್ ರಾವ್, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಪ್ರೇಮನಾಥ ಬಂಟ್ವಾಳ ಉಪಸ್ಥಿತರಿದ್ದರು.



