9aca1d0a-3f01-4fa5-b249-8b78b0837c01

ಪುತ್ತೂರು: ಕಟ್ಟಡವೊಂದರ  ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ದರೆ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ನೆಲ್ಲಿಕಟ್ಟೆ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಅನಿತಾ ಅಯಿಲ್ ಮಿಲ್ಸ್ ಕಟ್ಟಡದ ಬಳಿ ನಡೆದಿದೆ.

ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಗಂಭೀರ ಗಾಯಗೊಂಡಿದ್ದಾರೆ. ಇನ್ನುಳಿದ ಇಬ್ಬರು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಳುಗಳನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

ಮೃತರನ್ನು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಠ ತಿಳಿದು ಬರಬೇಕಿದೆ.

369686f6-dfe4-4db5-9d2f-008ce0c3f371

 

 

 

By suddi9

Leave a Reply

Your email address will not be published. Required fields are marked *