sunil-modi

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜತೆಗೆ ಮಾತನಾಡುವ ಅವಕಾಶ ಸಿಕ್ಕಿರುವುದು ನನ್ನ ಜೀವನದ ಅಪರೂಪ ಘಟನೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಸ್ಮರಿಸಿದ್ದಾರೆ.

ಬಿಜೆಪಿ ನಾಯಕ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಆಪ್ ಮೂಲಕ ಇಂದು ಸಂವಾದ ನಡೆಸಿದ್ದರು. ಸಂವಾದದ ಬಳಿಕ ಮಾತನಾಡಿದ ಸುನಿಲ್ ಕುಮಾರ್, ಮೋದಿ ಅವರ ಜತೆ ನೇರ ಮಾತುಕತೆ ನಡೆಸುತ್ತೇವೆ ಅಂತ ಕನಸಲ್ಲೂ ಊಹಿಸಿರಲಿಲ್ಲ. ಆದರೆ ಇವತ್ತು ಅವರ ಜತೆ ಮಾತಾಡುವ ಅವಕಾಶ ಸಿಕ್ಕಿರುವುದು ಅತ್ಯಂತ ಸಂತೋಷದ ವಿಚಾರ ಎಂದು ತಿಳಿಸಿದ್ದಾರೆ.

ಮೋದಿ ಅವರು ಕೊಟ್ಟ ಸೂಚನೆಗಳನ್ನು ಮೈಗೂಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಪ್ರಧಾನಿ ಜೊತೆ ಒಬ್ಬ ಸಾಮಾನ್ಯ ಕಾರ್ಯಕರ್ತ ಈ ರೀತಿ ಮಾತುಕತೆ ಮಾಡಿರುವಂತದ್ದು, ನನ್ನ ಜೀವನದ ಅತ್ಯಂತ ಅಮೂಲ್ಯವಾದ ಘಟನೆ ಎಂದಿದ್ದಾರೆ.

By suddi9

Leave a Reply

Your email address will not be published. Required fields are marked *