ಪುತ್ತೂರು: ಪುತ್ತೂರು ಮಹಿಳಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಕೈಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಯರಾಮ ರೈ, ಪುತ್ತೂರು ಮಹಿಳಾ ಬ್ಲಾಕ್ ಅಧ್ಯಕ್ಷೆ ವಿಶಾಲಕ್ಷ್ಮಿ ಬನ್ನೂರು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಗೊನ್ಸಲಿನ್, ನಗರಸಭೆಯ ನಾಮನಿರ್ದೇಶನ ಸದಸ್ಯೆ ರೂಪರೇಖಾ ಆಳ್ವ, ಮಹಿಳಾ ಕಾಂಗ್ರೆಸ್ ನಾಯಕಿಯರಾದ ಶಾರಾದ ಅರಸ್, ಜೆಸ್ಸಿ ಗೊನ್ಸಲಿನ್ ,ಹರಿಣಾಕ್ಷಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

