010518_dhcong2

ಮಂಗಳೂರು: ಬಿಲ್ಲವರಿಗೆ ಟಿಕೆಟ್ ಬಿಜೆಪಿ ವಂಚಿಸಿದ್ದು, ಬರೀ ಕ್ರಿಮಿನಲ್ ಕೃತ್ಯಗಳಿಗೆ ಬಿಲ್ಲವ ಯುವಕರನ್ನು ಬಿಜೆಪಿ ಬಳಸಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೂ ಮೊದಲಿನಿಂದಲೂ, ಪೂಜಾರಿ ಸಮುದಾಯದವರಿಗೆ ಸೂಕ್ತಸ್ಥಾನ ನೀಡುತ್ತಾ ಬಂದಿದೆ ಎಂದರು.

ಕಾಂಗ್ರೆಸ್ ಎಂದಿಗೂ ಜಾತಿಯ ಆಧಾರದಲ್ಲಿ ರಾಜಕೀಯ ಮಾಡಿಲ್ಲ, ಮಾಡುವುದು ಇಲ್ಲ. ಸರ್ವರಿಗೆ ಸಮಬಾಳು ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಆದರೆ ಇದು ಬಿಟ್ಟು ಬಿಜೆಪಿ ಜಾತಿಯ ಆಧಾರದಲ್ಲಿ ರಾಜಕೀಯ ಮಾಡುತ್ತಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಿಂದುತ್ವದ ನೆಲೆಯಲ್ಲಿ ಪ್ರಚಾರ ಮಾಡುತ್ತಿದೆ ಈ ಬಗ್ಗೆ ಚುನಾವನಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.

By Suddi9

Leave a Reply

Your email address will not be published. Required fields are marked *