ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಗುಡಿ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಿಂದ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಇಲ್ಲಿನ ನಿವಾಸಿ ರವಿ ಹೆಗಡೆ ಎಂಬವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇವರ ಪತ್ನಿ ಪ್ರಭಾ ಎಂಬವರು ಮನಸ್ತಾಪಗೊಂಡು ಸೋಮವಾರ ಬೆಳಗ್ಗೆ ಮನೆಯಿಂದ ಹೊರಟು ಹೋಗಿದ್ದಾರೆ. ಇವರಿಗೆ ಇಬ್ಬರು ಹೆಣ್ಮಕ್ಕಳು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
