ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ಚೆಂಡಾಡಿ ಸ್ಟೋರ್ ಎಂಬಲ್ಲಿ ನಿಲ್ಲಿಸಿದ್ದ ಬೈಕೊಂದು ಕಳವಾಗಿದೆ ಎಂದು ನಗರ ಪೊಲೀಸ್ ಠಾಣೆಗೆ ಸೋಮವಾರ ದೂರಿಕೊಂಡ ಘಟನೆ ನಡೆದಿದೆ.
ಇಲ್ಲಿನ ಶಾಂತಿ ಅಂಗಡಿ ನಿವಾಸಿ ಅಬ್ದುಲ್ ಮಜೀದ್ ಎಂಬವರು ಕಳೆದ ಶುಕ್ರವಾರ ರಾತ್ರಿ ನಿಲ್ಲಿಸಿದ್ದ ಬೈಕ್ ಶನಿವಾರ ಬೆಳಿಗ್ಗೆ ನಾಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
