4-May-2

ಮಂಗಳೂರು: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಕಾಂಗ್ರೆಸ್‌ನ ಶಶಿರಾಜ್‌ ಶೆಟ್ಟಿ ಕೊಳಂಬೆ ಸಹಿತ ಸುಮಾರು 125 ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.

ಈ ವೇಳೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸಲಾರಂಭಿಸಿದ್ದು, ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತ ಹಲವು ಮಂದಿ ಬಿಜೆಪಿಯನ್ನು ಸೇರಿಕೊಳ್ಳುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ಧಿ ಸಚಿವ ಡಾ. ಮಹೇಂದ್ರ ಸಿಂಗ್‌, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ರುಕ್ಮಯ ಪೂಜಾರಿ, ಸುಲೋಚನಾ ಜಿ.ಕೆ. ಭಟ್‌, ಹರಿಕೃಷ್ಣ ಬಂಟ್ವಾಳ್‌, ರವಿಶಂಕರ ಮಿಜಾರು, ಸುದರ್ಶನ ಮೂಡುಬಿದಿರೆ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *