ಮಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಆರೋಪಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಒಳ ಒಪ್ಪಂದ ಉಪಾಯ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಪಕ್ಷವೇ ಈ ಬಾರಿಯೂ ಬಹುಮತಗಳಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಎಲ್ಲೆಡೆಯೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಪೈಪೋಟಿ ಇದೆ. ಕೆಲವೊಂದು ಸ್ಥಳದಲ್ಲಿ ಮಾತ್ರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಪರ ಕೆಲಸಗಳು ಚುನಾವಣೆಯಲ್ಲಿ ವರದಾನವಾಗಲಿದೆ ಎಂದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

